Posts

Showing posts from August, 2020

ಶಿವಮೊಗ್ಗ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ-ಸಿಎಸ್.ಷಡಾಕ್ಷರಿ

Image
 ಶಿವಮೊಗ್ಗ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ-ಸಿಎಸ್.ಷಡಾಕ್ಷರಿ #ಜಿಲ್ಲಾಧಿಕಾರಿಗಳಾದ ಶ್ರೀ ಶಿವಕುಮಾರ್ ಇವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಕೆಳಗಿನ ಅಂಶಗಳನ್ನು ರಾಜ್ಯಾಧ್ಯಕ್ಷರು ಮತ್ತು ಶಿವಮೊಗ್ಗ ಅಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿಯವರು ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಕೆಳಕಂಡಂತೆ ತೀರ್ಮಾನಿಸಿತು. ಈ ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜ್ ,ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನುರಾಧ, ಡಿಡಿಪಿಐ ರಮೇಶ್, ಡಿ.ಹೆಚ್.ಓ ರಾಜೇಶ್ ಸುರಗೀಹಳ್ಳಿ- ಸಮಿತಿ ಸದಸ್ಯರಾದ ಕೃಷ್ಣಪ್ಪ-ಭದ್ರಾವತಿ, ಚಿನ್ನಪ್ಪ-ಶಿಕಾರಿಪುರ,ಪರಮೇಶ್ವರಪ್ಪ-ಸಾಗರ,ಸತೀಶ್-ತೀರ್ಥಹಳ್ಳಿ, ಮಂಜುನಾಥ್-ಸೊರಬ, ಕ್ರಷ್ಣಮೂರ್ತಿ-ಹೊಸನಗರ, ಜಿಲ್ಲಾ ಸಂಘದ ಕಾರ್ಯದರ್ಶಿ-ಶಾಂತರಾಜ್, ಉಪಾಧ್ಯಕ್ಷರಾದ-ಮಾರುತಿ ಹಾಗೂ ಶಶಿಕುಮಾರ್, ಶಿವರಾಯಪ್ಪನವರು ಉಪಸ್ಥಿತರಿದ್ದರು .  1. ನೌಕರರ ಮೇಲಿನ ಹಲ್ಲೆಗೆ ಕಡಿವಾಣ.  2.ಜಿಲ್ಲಾ ಹಂತದಲ್ಲಿನ  ಸಕ್ಷಮ ಪ್ರಾಧಿಕಾರಿಗಳು ಬಾಕಿ ಇರುವ ಪದೋನ್ನತಿ ಪ್ರಕ್ರಿಯೆಗಳನ್ನು ತ್ವರಿತವಾಗಿ ಕೈಗೆತ್ತಿಕೊಂಡು ಜ್ಯೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸುವುದು ಹಾಗೂ ಪ್ರತಿ 6 ತಿಂಗಳಿಗೊಮ್ಮೆ ಅರ್ಹ ನೌಕರರಿಗೆ ಪದೋನ್ನತಿ ನೀಡಲು ಕ್ರಮ. 3.ಕಾಲಮಿತಿ ವೇತನ ಬಡ್ತಿ, 15 ವರ್ಷಗಳ ಸ್ವಯಂಚಾಲಿತ ವೇತನ ಬಡ್ತಿ, 20,25 ಹಾಗೂ 30 ವರ್ಷಗಳ ಹೆಚ್ಚುವರಿ ವೇತನ ಬಡ್ತಿಗಳನ್ನು ವಿಳಂಬವಿಲ್ಲದೆ ಶೀಘ್ರ ಇತ್ಯರ್ಥಪಡಿಸಲು ಆಯಾ ಇಲಾಖ

ಬಾಕಿ ಇರುವ ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಗಳನ್ನು ಕೂಡಲೆ ಇತ್ಯರ್ಥಪಡಿಸುವಂತೆ ಮುಖ್ಯ ಮಂತ್ರಿಗಳಿಂದ ಸೂಚನೆ - ಸಿ.ಎಸ್. ಷಡಾಕ್ಷರಿ

Image
ರಾಜ್ಯದ ಸರ್ಕಾರಿ ನೌಕರರ ಆದ್ಯ  ಗಮನಕ್ಕೆ 2020-21ನೇ ಆರ್ಥಿಕ ಸಾಲಿನಲ್ಲಿ ನೇರ ನೇಮಕಾತಿಗಳನ್ನು ತಡೆಹಿಡಿದಿರುವ ಆದೇಶವನ್ನು ಅನುಕಂಪ ಆಧಾರದ ನೇಮಕಾತಿಗಳಿಗೂ ಅನ್ವಯಿಸಿ, ವಿವಿಧ ಇಲಾಖೆಗಳಲ್ಲಿ ಅನುಕಂಪ ನೇಮಕಾತಿಗಳನ್ನು ತಡೆಹಿಡಿಯಲಾಗಿತ್ತು. ಮೃತ ಸರ್ಕಾರಿ ನೌಕರರ ಕುಟುಂಬ ನಿರ್ವಹಣೆ ಹಿತದೃಷ್ಟಿಯಿಂದ ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಗಳನ್ನು ಇತ್ಯರ್ಥಪಡಿಸುವಂತೆ ಮಾನ್ಯ ಮುಖ್ಯ ಮಂತ್ರಿಗಳಿಗೆ ಸಂಘವು ಮನವಿ ಸಲ್ಲಿಸಿತ್ತು. ಮಾನ್ಯ ಮುಖ್ಯ ಮಂತ್ರಿಗಳು ಬಾಕಿ ಇರುವ ಅನುಕಂಪ ನೇಮಕಾತಿ ಪ್ರಸ್ತಾವನೆಗಳನ್ನು ಕೂಡಲೆ ಇತ್ಯರ್ಥಪಡಿಸುವಂತೆ ಮಾನ್ಯ ಸಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದು, ಅದರನ್ವಯ ಆದೇಶ ಹೊರಡಿಸುವಂತೆ ಮಾನ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.  ಈ ಬಗ್ಗೆ ಶೀಘ್ರ ಆದೇಶ ಹೊರಬೀಳಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ C & R ಸಮಗ್ರ ಪರಿಷ್ಕರಣಿಗೆ ಒತ್ತಾಯ-ಸಿ.ಎಸ್. ಷಡಾಕ್ಷರಿ

Image
ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಎಲ್ಲಾ ನೌಕರರ ಆದ್ಯ ಗಮನಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಾವಳಿಗಳು ಸುಮಾರು 60 ವರ್ಷ ಹಳೆಯದಾಗಿರುತ್ತದೆ.  ಪ್ರತಿ 3 ವರ್ಷಗಳಿಗೊಮ್ಮೆ ಪುನರಾವಲೋಕನ ಮಾಡಿ ವೃಂದ ಮತ್ತು ನೇಮಕಾತಿ ನಿಯಮಾವಳಿಗಳನ್ನು ಪರಿಷ್ಕರಿಸಬೇಕಾಗಿದ್ದು, ಈ ಕಾರ್ಯವನ್ನು ಕೈಗೆತ್ತಿಕೊಂಡು ಸುಮಾರು ವರ್ಷಗಳಾದರೂ ಪೂರ್ಣಗೊಂಡಿರುವುದಿಲ್ಲ.  ಇದರಿಂದಾಗಿ ಪದೋನ್ನತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬವಾಗುತ್ತಿರುವ ಅಂಶವನ್ನು ಸಂಘವು ಮನಗಂಡು ಮಾನ್ಯ ಮುಖ್ಯ ಮಂತ್ರಿಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಮಗ್ರ ತಿದ್ದುಪಡಿ ಮಾಡುವಂತೆ ಮನವಿ ಸಲ್ಲಿಸಿತ್ತು. ಸಂಘದ ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯ ಮಂತ್ರಿಗಳು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಮಗ್ರ ತಿದ್ದುಪಡಿ ಮಾಡುವಂತೆ ಸೂಚಿಸಿರುತ್ತಾರೆ.

ಶಿಕ್ಷಕರ ವರ್ಗಾವಣೆಗೆ ಒತ್ತಾಯ-ಸಿ.ಎಸ್. ಷಡಾಕ್ಷರಿ

Image
ಶಿಕ್ಷಕರ ವರ್ಗಾವಣೆಗಾಗಿ ವೇಳಾಪಟ್ಟಿ ಪ್ರಕಟಿಸುವಂತೆ ಒತ್ತಾಯ-ಸಿ.ಎಸ್.ಷಡಾಕ್ಷರಿ .   ಸನ್ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರ ಸೂಚಿಸಿರುವಂತೆ ನೂತನವಾಗಿ ಜಾರಿಗೆ ಬಂದಿರುವ ಶಿಕ್ಷಕರ ವರ್ಗಾವಣೆ ಕಾಯ್ದೆಯನ್ವಯ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯನ್ನು ಪೂರ್ಣಗೊಳಿಸುವ ಸಲುವಾಗಿ ವೇಳಾಪಟ್ಟಿ ಪ್ರಕಟಿಸುವುದು, ಕಳೆದ ಸಾಲಿನಲ್ಲಿ ಕೆಲವು ಶಿಕ್ಷಕರು ಕಡ್ಡಾಯ/ಹೆಚ್ಚುವರಿ ವರ್ಗಾವಣೆಗೆ ಒಳಗಾಗಿದ್ದು, ಅಂತಹ ಶಿಕ್ಷಕರಿಗೆ ನೆರವಾಗುವ ಉದ್ದೇಶದಿಂದ ನೂತನ ವರ್ಗಾವಣೆ ಕಾಯ್ದೆಯಲ್ಲಿ ವರ್ಗಾವಣೆಗೆ ಅವಕಾಶ ಕಲ್ಪಿಸಿರುವಂತೆ ಪ್ರಸಕ್ತ ಸಾಲಿನ ವರ್ಗಾವಣೆಗೂ ಮುನ್ನಾ ಖಾಲಿ ಹುದ್ದೆ ಲಭ್ಯತೆ ಅನುಸಾರ ಅವರು ಬಯಸುವ ಸ್ಥಳಗಳಿಗೆ ವರ್ಗಾವಣೆ ಮಾಡುವುದು ಸೇರಿದಂತೆ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಭೋಧಕೇತರ ಸಿಬ್ಬಂದಿವರ್ಗದವರ ಮುಂಬಡ್ತಿ ಬೇಡಿಕೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘಧ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಒತ್ತಾಯಿಸಿದರು. ಅವರು ನಿನ್ನೆ ಬೆಂಗಳೂರಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯಕ್ತರನ್ನು ಭೇಟಿ ಮಾಡಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಚರ್ಚಿಸಿದರು. ಪ್ರಸಕ್ತ ಸಾಲಿನ ವರ್ಗಾವಣೆ ಪ್ರಾರಂಭಿಸುವ ಪೂರ್ವದಲ್ಲಿ ಅವಧಿ ಪೂರ್ಣಗೊಳಿಸಿದ ಸಿ.ಆರ್.ಪಿ ಮತ್ತು ಬಿ.ಆರ್.ಪಿ ಗಳಿಗೆ ಜಿಲ್ಲೆಯಲ್ಲಿ ಖಾಲಿಯಿರುವ ಯಾವುದಾದರೊಂದು ತಾಲ್ಲೂಕಿಗೆ ಸ್ಥಳ ಆಯ್ಕೆ ಮಾ

ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿಎಸ್ ಷಡಕ್ಷರಿಯವರ ಒಂದು ವರ್ಷದ ಸಾಧನಾ ಪತದ ಕಿರುಹೊತ್ತಿಗೆ ಆನ್ಲೈನ್ ಮೂಲಕ ಬಿಡುಗಡೆ

Image
 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಸಿಎಸ್ ಷಡಕ್ಷರಿ ರವರು ರಾಜ್ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾರ್ಥಕ ಮೊದಲ ಹೆಜ್ಜೆಯೇ 1ವರ್ಷದ ಸಾಧನಾ ಪತದ ಕಿರುಹೊತ್ತಿಗೆ ಬಿಡುಗಡೆ ಸಮಾರಂಭವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಶಡಕ್ಷರಿ ರವರು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡುವುದರ ಮೂಲಕ ಉದ್ಘಾಟಿಸಿದರು ರಾಜ್ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಈ ಒಂದು ವರ್ಷದ ಅವಧಿಯಲ್ಲಿ ನೌಕರರ ಹಲವು ಸಮಸ್ಯೆ ಹಲವು ದಶಕಗಳ ಸಮಸ್ಯೆಗಳಿಗೆ ಸಂಘದ ಪದಾಧಿಕಾರಿಗಳು ಹಾಗೂ ಸರಕಾರದ ಸಹಕಾರದೊಂದಿಗೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದ್ದೇವೆ ಅಲ್ಲದೇ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ನೌಕರರ ಪರವಾದ ಕೆಲಸಗಳನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೈಗೊಂಡಿದೆ ಎಂದು ರಾಜ್ಯ ಅಧ್ಯಕ್ಷರಾದ ಶ್ರೀ ಶಡಕ್ಷರಿ ರವರು ತಿಳಿಸಿದರು